ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರಕಲ್ಪಿಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ

ಜನವರಿ 18ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಬೃಹತ್  ಸಮಾವೇಶ.

ರಿಪ್ಪನ್‌ಪೇಟೆ;- ಜನವರಿ 18ರಂದು ಸಾಗರ ಸಂತೆ ಮೈದಾನದಲ್ಲಿಏರ್ಪಡಿಸಲಾಗಿದ್ದು ಆಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಮಂತ್ರಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು.

ಪಟ್ಟಣದ ರಾಮಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿಆಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ.ಅಲ್ಲದೆ.ವಿದೇಶಿ ಆಡಿಕೆ ಅಮದಿನಿಂದಾಗಿ ನಮ್ಮ ಮಲೆನಾಡಿನಅಡಿಕೆ ಬೆಲೆ ಕಡಿಮೆಯಾಗುವಂತಾಗಿದ್ದುರೈತ ಸಮೂಹ ಹೈರಾಣಾಗಿದ್ದಾರೆ ಈ ಎಲ್ಲ ಸಮಸ್ಯಗೆಕೇಂದ್ರ ಸರ್ಕಾರ ಸ್ಪಂದಿಸಿ ಬೆಳೆಗಾರರ ಹಿತಕಾಯುವಂತೆ ಅಗ್ರಹಿಸಿ ಜನವರಿ ೧೮ ರಂದು ಸಾಗರದ ಸಂತೆ ಮೈದಾನದಲ್ಲಿ ಸಾಗರ-ಸೊರಬ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರ ಬೃಹತ್ ಸಮಾವೇಶ’’ವನ್ನು ಆಯೋಜಿಸಲಾಗಿದ್ದು ಕೇಂದ್ರ ಕೃಷಿ ರೈತ ಕಲ್ಯಾಣ ಸಚಿವರು ಶಿವರಾಜ್‌ಸಿಂಗ್ ಚೌವ್ಹಾಣ್ಉದ್ಘಾಟಿಸುವರು. ರಾಜ್ಯತೋಟಗಾರಿಕಾ ಸಚಿವಎಸ್.ಎಸ್.ಮಲ್ಲಿಕಾರ್ಜುನ ಸ್ಮರಣಿಕೆ ಬಿಡುಗಡೆ ಮಾಡುವರು.ಸಂಸದ ಬಿ.ವೈ.ರಾಘವೇಂದ್ರ ವಸ್ತುಪ್ರದರ್ಶನವನ್ನು  ಬಿ.ವೈ.ರಾಘವೇಂದ್ರಉದ್ಘಾಟಿಸುವರು,ರಾಜ್ಯ ಶಿಕ್ಷಣ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಗೌರವ ಸಮರ್ಪಣೆ ಜರುಗಲಿದ್ದು ಈ ಸಮಾವೇಶದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಗೋಪಾಕೃಷ್ಣ ಬೇಳೂರು ವಹಿಸುವರು ಎಂದರು.

ಈ ಸಮಾವೇಶದಲ್ಲಿಅಡಿಕೆ ಬೆಳೆಗಾರರ ಸಮಾವೇಶ ಸಮಿತಿಗೌರವಾಧ್ಯಕ್ಷ ಹೆಚ್.ಎಸ್.ಮಂಜಪ್ಪ,ಸಾಗರ ಪ್ರಾಂತ್ಯಅಡಿಕೆ ಬೆಳೆಗಾರ ಸಂಘದಅಧ್ಯಕ್ಷ ವ. ಶಂ ರಾಮಚಂದ್ರಭಟ್ ಹಾಗೂ ಜಿಲ್ಲೆಯ ರಾಜಕೀಯ ಮುಖಂಡರು ಸಹಕಾರಿ ಸಂಘದ ಅಧ್ಯಕ್ಷರುಗಳು ಸದಸ್ಯರು ಭಾಗವಹಿಸುವರು ಎಂದರು

ಇದೇ ಸಮಾವೇಶದಲ್ಲಿ ಹಿರಿಯರು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡುತಿಮ್ಮಪ್ಪಇವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು

ಸುದ್ದಿಗೋಷ್ಠಿಯಲ್ಲಿಜಿಲ್ಲಾ ಬಿಜೆಪಿ ಅಧ್ಯಕ್ಷಟಿ.ಡಿ.ಮೇಘರಾಜ್,ಅಡಿಕೆ ಬೆಳೆಗಾರ ಸಂಘದ ಸಹ ಸಂಚಾಲಕ ಹಕ್ರೆ ಮಲ್ಲಿಕಾರ್ಜುನ,ಬಿಜೆಪಿ ಮಹಾಶಕ್ತಿ ಕೇಂದ್ರದ ಆಧ್ಯಕ್ಷ ಎನ್.ಸತೀಶ್, ಮುಖಂಡ ರಾದ ಆರ್.ಟಿ.ಗೋಪಾಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುದೀಂದ್ರಪೂಜಾರಿ. ಎಂ ಸುರೇಶ್ ಸಿಂಗ್ ,ಸುಂದರೇಶ್ , ನಾಗಾರ್ಜುನಸ್ವಾಮಿ, ಮಂಜುಳಕೇತಾರ್ಜಿ, ಯೋಗೇಂದ್ರಗೌಡ,ದೀಪಾ ಸುಧೀರ್ , ಪಿ.ರಮೇಶ್, ಸುದೀರ್,ಮುರುಳಿಕೆರೆಹಳ್ಳಿ, ಸೇರಿದಂತೆ   ಪಕ್ಷದ ಮುಖಂಡರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

2 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

4 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

5 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

23 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

23 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

1 day ago