ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು.
ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು.
ಇಂದು ಅವರ ಸ್ವಗೃಹಕ್ಕೆ ತೆರಳಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಂತಿಮ ದರ್ಶನ ಪಡೆದರು.
ಇನ್ನೂ ಇಂದು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರವನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ಸಾಗರದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…