Headlines

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More