ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

30-01-2025 ರಂದು ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆ ಹೊರಡಿಸಿತ್ತು‌ ನಂತರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಮಗಾರಿಯನ್ನು ಮುಂದೂಡಲಾಗಿತ್ತು.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???

ರಿಪ್ಪನ್ ಪೇಟೆ,ಹೆದ್ದಾರಿಪುರ,ಮೂಗೂಡ್ತಿ , ಬಿದರಹಳ್ಳಿ , ಹಾಗೂ ಜಂಬಳ್ಳಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

44 minutes ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

19 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

21 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago