ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ ಕಟ್ಟಡವನ್ನು ತೆರವುಗೊಳಿಸುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತಿದ್ದಾರೆ ಇನ್ನೂ ವಿನಾಯಕ ವೃತ್ತದಲ್ಲಿ ಅಶೋಕ ಸ್ಥಂಭ ಹಾಗೂ ಹೈಟೆಕ್ ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಸಲಾಗುವುದು, ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ ಪ್ರಯಾಣಿಕರಿಗೆ ಅನುಕೂಲವಾಗಲು ಈಗಿರುವ ಬಸ್ ನಿಲ್ದಾಣದ ಜಾಗದಲ್ಲಿ ಹೈಟೆಕ್ ಶೆಲ್ಟರ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದರು.

ಆಟೋ ನಿಲ್ದಾಣವನ್ನು ಒಂದೇ ಕಡೆ ನಿರ್ಮಿಸದೇ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪ್ರಯಾಣಿಕರಿಗೆ ಕೂಡಲೇ ಆಟೋ ಲಭ್ಯವಾಗುವಂತೆ ವಿಭಜಿಸಿ ಆಟೋ ಚಾಲಕರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.

ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಮಧುಸೂಧನ್ , ಆಸೀಫ಼್ ಭಾಷಾ ,ಚಂದ್ರೇಶ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ ,ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ , ಮುಖಂಡರಾದ ರವೀಂದ್ರ ಕೆರೆಹಳ್ಳಿ ,ಈಶ್ವರಪ್ಪ ಗೌಡ , ಹಾಲಸ್ವಾಮಿ ಗೌಡ , ಶ್ರೀಧರ್ ,ಎನ್ ವರ್ತೇಶ್ , ಆರ್ ಎಸ್ ಶಂಷುದ್ದೀನ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *