ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ
ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು
ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ ಕಟ್ಟಡವನ್ನು ತೆರವುಗೊಳಿಸುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತಿದ್ದಾರೆ ಇನ್ನೂ ವಿನಾಯಕ ವೃತ್ತದಲ್ಲಿ ಅಶೋಕ ಸ್ಥಂಭ ಹಾಗೂ ಹೈಟೆಕ್ ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಸಲಾಗುವುದು, ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ ಪ್ರಯಾಣಿಕರಿಗೆ ಅನುಕೂಲವಾಗಲು ಈಗಿರುವ ಬಸ್ ನಿಲ್ದಾಣದ ಜಾಗದಲ್ಲಿ ಹೈಟೆಕ್ ಶೆಲ್ಟರ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದರು.
ಆಟೋ ನಿಲ್ದಾಣವನ್ನು ಒಂದೇ ಕಡೆ ನಿರ್ಮಿಸದೇ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪ್ರಯಾಣಿಕರಿಗೆ ಕೂಡಲೇ ಆಟೋ ಲಭ್ಯವಾಗುವಂತೆ ವಿಭಜಿಸಿ ಆಟೋ ಚಾಲಕರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಮಧುಸೂಧನ್ , ಆಸೀಫ಼್ ಭಾಷಾ ,ಚಂದ್ರೇಶ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ ,ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ , ಮುಖಂಡರಾದ ರವೀಂದ್ರ ಕೆರೆಹಳ್ಳಿ ,ಈಶ್ವರಪ್ಪ ಗೌಡ , ಹಾಲಸ್ವಾಮಿ ಗೌಡ , ಶ್ರೀಧರ್ ,ಎನ್ ವರ್ತೇಶ್ , ಆರ್ ಎಸ್ ಶಂಷುದ್ದೀನ್ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply