
ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ
ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ, ತಹಶೀಲ್ದಾರ್ ಅವರಿಗೆ ಯಾವುದೇ ಅಕ್ರಮಗಳ ಕುರುಹುಗಳು ಪತ್ತೆಯಾಗಿರಲಿಲ್ಲ.
ಆದರೆ ಇಂದು ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಸರಿ ಸುಮಾರು 60 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿಗಳು ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಇದ್ದರು.
