HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು ಗಮನಿಸಿ, ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದು, ತಕ್ಷಣವೇ ಆಕೆ ಪ್ರತಿಭಟಿಸಿ ಬೈದು ಮನೆಯಿಂದ ಹೊರಗೆ ಕಳಿಸಿದ್ದಾರೆ.

ಆನಂತರ ಈತನ ಪತ್ನಿಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿ, ಮಾನಸಿಕ ಒತ್ತಡದಿಂದಾಗಿ ತಡವಾಗಿ ಡಿಸೆಂಬರ್‌ 31ರಂದು ಪೊಲೀಸರಿಗೆ ದೂರು ನೀಡಿದ್ದಾಗಿ ವೈದ್ಯೆ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…

10 hours ago

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…

10 hours ago

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…

10 hours ago

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

1 day ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

1 day ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

1 day ago