ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು. ತದನಂತರ ವಿಷಯ ಗೊತ್ತಾಗಿ ಶಶಿಧರ್ ರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಕಾಲ ಮಿಂಚಿಹೋಗಿತ್ತು.

ವೈದ್ಯರು ಚಿಕಿತ್ಸೆ ಕೊಡಲು ಅಣಿಯಾಗಲು ಶಶಿಧರ್ ರ ಅನಾರೋಗ್ಯದ ಸಮಸ್ಯೆ ಎದುರಾಗಿತ್ತು. ಕುಟುಂಬಸ್ಥರ ಸಹಿ ಪಡೆದು ಚಿಕಿತ್ಸೆ ಮುಂದುವರೆಸಲು ಅಣಿಯಾಗುವ ಹೊತ್ತಿಗೆ ಎಮೆರ್ಜೆನ್ಸಿಯಲ್ಲಿ ದಾಖಲಾಗಿದ್ದ ಶಶಿಧರ್ ರವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಶಿವಮೊಗ್ಗದ ಪತ್ರಕರ್ತರು ಶಶಿಯವರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು.  ಈ ಸಂದರ್ಭದಲ್ಲಿ ಅವರ ಕಣ್ಣಾಲೆಗಳು ಒದ್ದೆಯಾಗಿದ್ದವು. ಬದುಕುವ ಧೈರ್ಯವನ್ನು ಅವರು ಕಳೆದುಕೊಂಡಂತೆ ಭಾಸವಾದರು.

ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ಕಡೂರಿಗೆ ಸನಿಹವಿರುವ ಕಲ್ಲಳ್ಳಿ  ಗ್ರಾಮದವರು. ತಂದೆ ಹೊಸಂತಪ್ಪ ಹಾಗು ತಾಯಿ ಸಾವಿತ್ರಮ್ಮನ ಹಿರಿಯ ಪುತ್ರನಾಗಿ ಜನಿಶಿದ ಶಶಿ ಸ್ವಗ್ರಾಮದಲ್ಲಿ ನಂತರ ಅರಸೀಕೆರೆಯಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿದರು. ಪತ್ರಿಕೋಧ್ಯಮಕ್ಕೆ ಬರುವ ಆಶಯದೊಂದಿಗೆ ಮೈಸೂರಿನಲ್ಲಿ 2006 ರಲ್ಲಿ ಎಂಎ ಜರ್ನಲಿಸಂ ಸೇರ್ಪಡೆಗೊಂಡರು. ಸ್ನಾತಕೊತ್ತರ ಪದವಿಯ ನಂತರ ಈಟಿವಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದರು.

ನಂತರ ಚಾಮರಾಜ ನಗರದಲ್ಲಿ ಸುವರ್ಣ ಟಿವಿಯ ವರದಿಗಾರರಾಗಿ ಸೇವೆ ಸಲ್ಲಿಸದರು. ಇದಾದ ಬಳಿಕ ಶಿವಮೊಗ್ಗದಲ್ಲಿ ಕಳೆದ ಆರು ವರ್ಷಗಳಿಂದ ಪಬ್ಲಿಕ್ ಟಿವಿಯಲ್ಲಿ ವರದಿಗಾರಗಾಗಿ ಸೇವೆ ಸಲ್ಲಿಸುತ್ತಾ ಬಂದರು. ಈ ಸಂದರ್ಭದಲ್ಲಿ ಕಿಡ್ನಿ ಸಮಸ್ಯೆ ಎದುರಾಗಿ, ಡಯಾಲೀಸ್ ಚಿಕಿತ್ಸೆಗೆ ಒಳಗಾಗಿದ್ದರೂ, ಶಶಿಧರ್, ಫೀಲ್ಡ್ ನಲ್ಲಿ ಆಕ್ಟಿವ್ ಆಗಿಯೇ ಕರ್ತವ್ಯ ನಿರ್ವಹಿಸಿ, ಎಲ್ಲದರನ್ನು ಬೆರಗಾಗುವಂತೆ ಮಾಡಿದ್ದರು.

ಆದರೆ ಶಶಿಧರ್ ಅವರ ಅಕಾಲಿಕ ಮರಣ ಶಿವಮೊಗ್ಗ ಮಾತ್ರವಲ್ಲ ರಾಜ್ಯದ ಪತ್ರಕರ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ನಾಳೆ ಹುಟ್ಟೂರಿನಲ್ಲಿ ಶಶಿಯವರ ಪಾರ್ಥಿವ ಶರೀರದ ಅಂತ್ಯಕ್ರೀಯೆ ನಡೆಯಲಿದೆ.

ಶಶಿ  ಸಾವಿಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗು ಕರ್ನಾಟಕ ಕಾರ್ಯ. ನಿರತ ಪತ್ರಕರ್ತರ ಸಂಘ ಶಿವಮೊಗ್ಗ ಶಾಖೆ ಕಂಬನಿ ಮಿಡಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

4 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

21 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

22 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

23 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago