ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು.

ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು.

ಮೊದಲ ದಿನದ ದಿನದ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿ ದೇವಿಗೆ ಹೂವು. ಅಕ್ಕಿ. ಬೆಲ್ಲ. ವಿವಿಧ ಸೇವೇ ನೀಡಿ ಹರಕೆ ಪೂಜೆ ಸಲ್ಲಿಸಿ. ಮುಡಿಗಂಧ ಪ್ರಸಾದ ಸ್ವೀಕರಿಸಿದರು.

ಸೀಗೇ ಕಣಿವೆಯ ಮೂಲ ಸ್ಥಳದಿಂದ ನೂರಾರು ಮಹಿಳೆಯರು ಪೂರ್ಣಕುಂಭ ಕಳಶ ಹೊತ್ತು, ಚೌಡೇಶ್ವರಿ ದೇವಿಗೆ ಉಘೇ ಉಘೇ ಎಂದು ಈಗಿನ ಸಿಗಂದೂರಿನತ್ತ ಹೆಜ್ಜೆ ಹಾಕಿದರು. ಸಿಗೇ ಕಣಿವೆಯ ಮೂಲ ಸ್ಥಾನದಲ್ಲಿ ದೇವಿಯ ಉದ್ಭವ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹೊಸನಗರದ ಯೋಗೇಂದ್ರ ಅವಧೂತ ಸ್ವಾಮೀಜಿ ಶ್ರೀ ಕ್ಷೇತ್ರ  ಕಾರ್ತಿಕೇಯ ಪೀಠ, ಸಾರಗನ ಜಡ್ಡು ಇವರು ಜಾತ್ರಾ ಮಹೋತ್ಸವದ ವೇದಿಕೆಯ ದಿವ್ಯ ಸಾನಿಧ್ಯ ವಹಿಸಿ ಅಶಿರ್ವಚನ ನೀಡಲಿದ್ದಾರೆ.

ಅಖಂಡ ಜ್ಯೋತಿ ಮೆರವಣಿಗೆಗೆ ಧರ್ಮಾಧಿಕಾರಿ ಡಾ ಎಸ್ ನವರ ಸಮ್ಮುಖದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಚಾಲನೆ ನೀಡಿದರು. ಜಾತ್ರಾ ಮಹೋತ್ಸವಕ್ಕೆ ಚಾಲನೆಯನ್ನು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ನೇರವೇರಿಸಿದರು, ಅಥಿತಿಗಳಾಗಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಡಿವೈಎಸ್ ಪಿ ಪಿ.ವೀರೇಂದ್ರ ಕುಮಾರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈಡೀಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ, ಈಡೀಗ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಕೆಡಿಪಿ ಸದಸ್ಯ ಸತ್ಯನಾರಾಯಣ ಸತ್ಯನಾರಾಯಣ ಜಿ ಟಿ,  ತಾಲ್ಲೂಕು ಪಶು ವೈದ್ಯಕೀಯ ನಾಮ ನಿರ್ದೇಶಕ ಸದಸ್ಯ ಗಣೇಶ ಜಾಕಿ, ಶ್ರೀದೇವಿ ರಾಮಚಂದ್ರ. ಜಿಲ್ಲಾ ಮಟ್ಟದ ವಿವಿಧ ಸದಸ್ಯರು, ಕರೂರು ಹೋಬಳಿಯ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು. ಸದಸ್ಯರು ಗಣ್ಯರು ಉಪಸ್ಥಿತರಿದ್ದರು.

ಆನ್ನ ದಾಸೋಹದಲ್ಲಿ ತುಂಬಿ ತುಳಿಕಿದ ಭಕ್ತರು.
ಪ್ರಥಮ ದಿನದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ಅನ್ನ ಪ್ರಸಾದ ಪಡೆದರು. ಭಕ್ತಾದಿಗಳು ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ನಿರಂತರವಾಗಿ ಬೆಳಿಗ್ಗೆ. ಮಧ್ಯಾಹ್ನ. ಸಂಜೆ ದೇವಸ್ಥಾನ ಸಮಿತಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ 5ಗಂಟೆಯಿಂದ ವೇದಿಕೆಯಲ್ಲಿ ವಿವಿಧ ಕಲಾ ತಂಡಗಳಿಂದ ಭಜನೆ, ನಾಟ್ಯ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7ರಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನೆಡೆಯಿತು.

ಲಾಂಚ್ ನಲ್ಲಿ ಹೆಚ್ಚಿದ ಜನ ದಟ್ಟಣೆ :

ಮಂಗಳವಾರ ಜಾತ್ರಾ ಮಹೋತ್ಸವದ ಪ್ರಥಮ ದಿನ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ ಭಕ್ತರು  ಟ್ಯಾಕ್ಸಿ, ಬಸ್ಸು ದ್ವಿಚಕ್ರ ವಾಹನದಲ್ಲಿ ಆಗಮಿಸಿ. ಅಂಬಾರಗೊಡ್ಲು ಲಾಂಚ್ ತಟದಲ್ಲಿ ವಾಹನ ನಿಲ್ಲಿಸಿ. ಹೊಳೆಬಾಗಿಲು ಲಾಂಚ್ ಮೂಲಕ ಸಿಗಂದೂರು ದೇವಸ್ಥಾನ ಭಾಗಕ್ಕೆ ಬಂದರು. ಜನ ದಟ್ಟಣೆ ಹೆಚ್ಚು ಹಿನ್ನೆಲೆಯಲ್ಲಿ ಭಕ್ತರು. ಸ್ಥಳಿಯರು ಪ್ರಯಾಣ ಮಾಡಲು ಹರ ಸಾಹಸ ಪಟ್ಟರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago