ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ ದಾಳಿಯಿಂದ ಮುಕ್ತಿ ದೊರಕಿಸುವಂತೆ ಆರಣ್ಯ ಸಂರಕ್ಷಣಾಧಿಕಾರಿಗಳು ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಈಗ ಕಾಡಾನೆಗಳನ್ನು ಸ್ಥಳಾಂತರಿಸಲಾಗಿದ್ದು ಈ ಹೋರಾಟದಲ್ಲಿ ಭಾಗವಹಿಸಿದ ರೈತರಿಗೆ ಮತ್ತು ಕಾರ್ಯಾಚರಣೆ ನಡೆಸಿ ಸ್ಥಳಾಂತರಗೊಳಿಸಿದ ಅರಣ್ಯ ಇಲಾಖೆ ಆಧಿಕಾರಿಗಳಿಗೆ  ಕೃತಜ್ಞತೆ  ಸಲ್ಲಿಸುತ್ತೇನೆ ಎಂದರು.

ಹಲವು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳದಿಂದಾಗಿ ರೈತರ ಭತ್ತ ಕಬ್ಬು ಆಡಿಕೆ ಬಾಳೆ ಬೆಳೆಯನ್ನು ತುಳಿದು ತಿಂದು ದ್ವಂಸಗೊಳಿಸಿದ್ದು ಅಲ್ಲದೆ ಹಗಲು ರಾತ್ರಿ ರೈತರು ಹೊಲಗದ್ದೆಗಳಿಗೆ ಹೋಗುವುದು ಕಷ್ಟಕರವಾಗಿ ಭಯದಲ್ಲಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಎದುರಾಗಿತು. ಅಲ್ಲದೆ ಸೊಪ್ಪು ತರಲು ಹೋದ ವ್ಯಕ್ತಿಯನ್ನು ತಳಿದು ಸಾಯಿಸಿದ ಪ್ರಸಂಗವೂ ನಡೆದಿದ್ದು ಇದರಿಂದಾಗಿ ಮಲೆನಾಡಿನ ಜನತೆ ಹೈರಾಣರಾಗಿದ್ದರು. ಈ ಕುರಿತು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಜನವರಿ 24 ರಂದು ರೈತನಾಗರೀಕರೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ ಆರಣ್ಯ ಸಂರಕ್ಷಣಾಧಿಕಾರಿಗಳು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾಡಾನೆಗಳ ಹಿಂಡುಗಳನ್ನು ಈ ಕೂಡಲೇ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ ಬೆನ್ನಲೇ ಕಾಡಾನೆಗಳ ಗುಂಪು  ಹಿಂತಿರುಗಿರುತ್ತವೆ ಇದರಿಂದ ರೈತಾಪಿ ವರ್ಗ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಸಾರ್ವಜನಿಕರು ನಿಟ್ಟೂಸಿರು ಬಿಡುವಂತಾಗಿದೆ ಎಂದು ಹೇಳಿದರು

ಈ ರೈತರ ಹೋರಾಟದಲ್ಲಿ ಭಾಗವಹಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ,ಆರಗಜ್ಞಾನೇಂದ್ರ, ಡಿ.ಎಸ್.ಅರುಣ್ ಮಾಜಿ ಶಾಸಕರಾದ ಬಿ.ಸ್ವಾಮಿರಾವ್.ಕೆ.ಜಿ.ಕುಮಾರಸ್ವಾಮಿ, ಮತ್ತು ರೈತರಿಗೆ ಮತ್ತು ಅರಣ್ಯ ಇಲಾಖೆ ಆಧಿಕಾರಿಗಳಿಗೆ  ಕೃತಜ್ಞತೆ ವ್ಯಕ್ತಪಡಿಸಿ ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಕಾಡಾನೆಗಳು ಬಾರದಂತೆ ಕಾಡಿನ ದಾರಿಯಲ್ಲಿ ಅಡ್ಡಲಾಗಿ ಬೃಹತ್ ಗಾತ್ರದ ಇಪಿಟಿ ಟ್ರಂಚ್ ತೆಗೆಯುವ ಮೂಲಕ ರಸ್ತೆ ಬಂದ್ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ, ತಾಲ್ಲೂಕ್ ಬಿಜೆಪಿ ಉಪಾಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್, ಯುವ ಮೋರ್ಚಾ ಕಾರ್ಯದರ್ಶಿ ಮುರುಳಿಕೆರೆಹಳ್ಳಿ,ಷಣ್ಮುಖಪ್ಪ,ದಿವಾಕರ್ ಹಾಗೂ ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

17 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

17 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

17 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

22 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

24 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago