ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಬೇಕು
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ ವಿಧಿಸಲಾಗಿದೆ.
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…