RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ
ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು.
ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.
ಈ ಸಂಧರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು.
ದೇವಸ್ಥಾನದ ಅರ್ಚಕರು ಹಾಗೂ ಕಂತೆ ಸಿದ್ದೇಶ್ವರ ದೇವಸ್ಥಾನದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.