POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

Screenshot 20250212 200100 Chrome.jpg

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ.

ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ.

ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ ಬಳಿ ಸಡನ್ ಬ್ರೇಕ್ ನಿಂದ ಕೆಳಗೆ ಬಿದ್ದು ಸಾವಾಗಿದೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿ ಫುಟ್ ಬೋರ್ಡ್ ನ ಮೇಲೆ ನಿಂತಿದ್ದ 16 ವರ್ಷದ ವಿದ್ಯಾರ್ಥಿ ಕೆಳಗೆ ಬಿದ್ದು ಸಾವುಕಂಡಿದ್ದಾನೆ. ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಇಂದು ಬೆಳಿಗ್ಗೆ ಸಂಭವಿಸಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.