ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ
ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ.
ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಲಾಗಿದೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್‌ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್‌ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ ಎಂದು ಆರೋಪಿಸಲಾಗಿದೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಬೆದರಿಸಿದ್ದರು. ಆರು ಸಾವಿರ ಗೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ಆರು ಸಾವಿರ ರೂ. ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆಪಾದಿಸಲಾಗಿದೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…