RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ.
ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ.
ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು ಭತ್ತದ ಗೊಣಬೆಯನ್ನು ಶೇಖರಿಸಲಾಗಿತ್ತು ಅದರಲ್ಲಿ ಒಕ್ಕಲು ಮಾಡಿದ್ದ ಸುಮಾರು 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ ಸಮಯಕ್ಕೆ ಸರಿಯಾಗಿ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳು ಕರ್ತವ್ಯ ಪ್ರಜ್ಞೆ ಮೆರೆದ ಕಾರಣ ಭಾರಿ ಅನಾಹುತ ತಪ್ಪಿದೆ.
ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಸಿಬ್ಬಂದಿಗಳು :
ಬೈರಾಪುರ ಗ್ರಾಮದ ಹಲವು ರೈತರು ಒಕ್ಕಲು ಮಾಡಲು ಶೇಖರಿಸಿಟ್ಟಿದ್ದ ಸುಮಾರು 6 ಸಾವಿರಕ್ಕೂ ಹೆಚ್ಚು ಪಿಂಡಿಯಷ್ಟಿದ್ದ ಭತ್ತದ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿಕೊಂಡಿದ್ದು ಈ ಸಂಧರ್ಭದಲ್ಲಿ ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಸಿದರೂ ವಿದ್ಯುತ್ ಲೋಡ್ ಶೆಡ್ಡಿಂಗ್ ಇದ್ದ ಕಾರಣ ಸಾಧ್ಯವಾಗಿರಲಿಲ್ಲ ಆ ಸಂದರ್ಭದಲ್ಲಿ ಸ್ಥಳೀಯರು ಮೆಸ್ಕಾಂ ಇಲಾಖೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ತತ್ತಕ್ಷಣ ಎಚ್ಚೆತ್ತುಕೊಂಡ ಇಲಾಖೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿದ ಹಿನ್ನಲೆಯಲ್ಲಿ ಸುತ್ತಮುತ್ತಲಿದ್ದ ಬೋರ್ ವೆಲ್ ನೀರನ್ನು ಬಳಸಿ ಸಾಕಷ್ಟು ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.