ರಿಪ್ಪನ್ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ
ರಿಪ್ಪನ್ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಏರಿಸೀಮೆ ಕಿರುಚಿತ್ರದ ಟ್ರೈಲರ್ ಇಲ್ಲಿ ವೀಕ್ಷಿಸಿ👆
ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ.
ಮುಗ್ಧ ವ್ಯಕ್ತಿಯು ತನ್ನ ಜೀವನದಲ್ಲಿ ನಡೆದ ಅನ್ಯಾಯದ ವಿರುದ್ದ ಹೇಗೆ ಹೋರಾಡುತ್ತಾನೆ,ಬಲಾಡ್ಯ ವ್ಯಕ್ತಿಗಳ ವಿರುದ್ದ ಬಲಹೀನ ವ್ಯಕ್ತಿಯ ಪ್ರತೀಕಾರ ಹೇಗಿರುತ್ತದೆ..!? ಹಾಗೇಯೆ ಜೀವನವು ಎಲ್ಲರಿಗೂ ನ್ಯಾಯಯುತವಾಗಿರುವುದಿಲ್ಲ ಎನ್ನುವ ಕಥಾಹಂದರದಲ್ಲಿ ಮೂಡಿಬಂದಿರುವ ಕಿರುಚಿತ್ರವನ್ನು ಅಹಾನ್ ಎಂ ನಿರ್ದೇಶಿಸಿದ್ದಾರೆ.
ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ajithsinmha ಯೂಟ್ಯೂಬ್ ಚಾನೆಲ್ ನ್ನು subscri ಮಾಡಿ ಮಲೆನಾಡಿನ ಯುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕಾಗಿದೆ.
ಏರೀಸೀಮೆ ಕಿರು ಚಿತ್ರ ಯಶಸ್ವಿಯಾಗಲಿ ,ಅದ್ಬುತ ನಟನೆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿಯಾಗಿರುವ ಅಜಿತ್ ಸಿಂಹ ಸ್ಯಾಂಡಲ್ ವುಡ್ ನಲ್ಲಿ ನಾಯಕ ನಟನಾಗಿ ಮಿಂಚಲಿ ಎನ್ನುವುದೇ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಆಶಯ……
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್