ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!
ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿತನಿಂದ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವರದಿಯಾದ ೨೦೨೫ನೇ ಸಾಲಿನ ಎರಡು ಮತ್ತು ೨೦೨೪ನೇ ಸಾಲಿನ ಎರಡು ಪ್ರಕರಣ ಸೇರಿ ಒಟ್ಟು ನಾಲ್ಕು ಅಡಿಕೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ ೫ ಲ. ರೂ. ಗಳ ೧೦ ಕ್ವಿಂಟಾಲ್ ಒಣ ಅಡಿಕೆ, ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಅಂದಾಜು ಮೌಲ್ಯ ೪ ಲಕ್ಷದ ಅಮೇಜ್ ಹೋಂಡಾ ಕಾರ್ ಸೇರಿ ೯ ಲ. ರೂ. ಮಾಲನ್ನು ಅಮಾನತುಪಡಿಸಿಕೊಳ್ಳಲಾಗಿದೆ.
ಸಿಪಿಐ ಲಕ್ಷ್ಮೀಪತಿ ಆರ್.ಎಲ್, ಪಿಎಸ್‌ಐಗಳಾದ ರಮೇಶ, ಮಂಜುನಾಥ ಎಸ್ ಕುರಿ, ಕೃಷ ನಾಯ್ಕ ಹಾಗೂ ಸಿಬ್ಬಂದಿಗಳಾದ ಸಿ.ಹೆಚ್.ಸಿ ಅಣ್ಣಪ್ಪ, ಪ್ರಕಾಶ ನಾಯ್ಕ ಪ್ರಸನ್ನ, ಸವಿತ ಮತ್ತು ಸಿ.ಪಿ.ಸಿ ವಿಶ್ವನಾಥ ರವರುಗಳನ್ನು ಒಳಗೊಂಡ ತನಿಖಾ ತಂಡವನ್ನು ಪತ್ತೆಗೆ ರಚಿಸಲಾಗಿತ್ತು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…