ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ
ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀರ್ (35) ಅಬ್ದುಲ್ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇವೆಲ್ಲವುಗಳ ಒಟ್ಟು ಮೌಲ್ಯ ರೂ. 7,50,000/- ಎಂದು ಅಂದಾಜಿಸಲಾಗಿದೆ.
ದಿನಾಂಕ 22-2-2025ರಂದು ರಾತ್ರಿ, ಕಲ್ಯಾಣ ಗ್ರಾಮದ ಮನೆಯೊಂದರ ಶೆಡ್‌ನಲ್ಲಿ ಕಟ್ಟಿದ್ದ ಒಂದು ಎತ್ತನ್ನು, ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ದಾಖಲಾಗಿದ್ದ ಪ್ರಕರಣದ ತನಿಖೆಯಲ್ಲಿದ್ದ, ಬಂಕಾಪುರ ಠಾಣೆ ಪೊಲೀಸರಿಗೆ, ದಿನಾಂಕ 26-2-2025ರಂದು ಬಾಡ ಗ್ರಾಮದ, ಅರಮನೆ ಹತ್ತಿರ, ನಂಬರ್ ಪ್ಲೇಟ್ ಇಲ್ಲದೆ, ಒಂದು ಎತ್ತನ್ನು ತುಂಬಿಕೊಂಡು ಬಂದ ಬುಲೆರೋ ವಾಹನ ಅನುಮಾನಾಸ್ಪದವಾಗಿ ಕಂಡು ಬರುತ್ತದೆ. ತಕ್ಷಣ ವಾಹನದಲ್ಲಿದ್ದವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಎತ್ತುಗಳ ಕಳ್ಳನನದ ಬಗ್ಗೆ ಒಪ್ಪಿಕೊಂಡಿದ್ದಾರೆ.
ಅವರುಗಳು ನೀಡಿದ ಮಾಹಿತಿ ಮೇಲೆ ಕಲ್ಯಾಣ ಗ್ರಾಮದಲ್ಲಿ ಕದ್ದಿದ್ದ ಒಂದು ಎತ್ತು ಮತ್ತು ಅಗಡಿ ಗ್ರಾಮದಲ್ಲಿ ಕದ್ದಿದ್ದಎರಡು ಎತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ತಲೆಮರೆಸಿಕೊಂಡಿರುವ, ಮತ್ತೆ ಮೂವರ ಪತ್ತೆಕಾರ್ಯ ಮುಂದುವರೆದಿದೆ.
ಹಾವೇರಿ ಜಿಲ್ಲೆ ಎಸ್ಪಿ ಅಂಶುಕುಮಾರ್, ಅಡಿಷನಲ್ ಎಸ್ಪಿ ಲಕ್ಷ್ಮಣ ವೈ. ಶಿರಕೋಳ ಮತ್ತು ಶಿಗ್ಗಾಂವಿ ಉಪವಿಭಾಗದ ಡಿವೈಎಸ್ಪಿ ಕೆ.ವಿ. ಗುರುಶಾಂತಪ್ಪ ರವರುಗಳ ಮಾರ್ಗದರ್ಶನ, ಶಿಗ್ಗಾವಿ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಜಿ.ಕುಂಬಾರ್ ರವರ ಸಾರಥ್ಯದಲ್ಲಿ, ನಡೆದ ಕಾರ್ಯಾಚರಣೆಯಲ್ಲಿ ಬಂಕಾಪುರ ಠಾಣೆ ಸಬ್ ಇನ್ಸ್ ಪೆಕ್ಟರ್ ನಿಂಗರಾಜ್ ಕೆ ವೈ ಮತ್ತು ಎಸ್.ಎಂ. ವನಹಳ್ಳಿ ಹಾಗೂ ಸಿಬ್ಬಂದಿಯವರಾದ ಹೆಚ್ ಎ.ಕೆ. ನದಾಫ್, ಪಿಸಿರವರಾದ ವೆಂಕಟೇಶ ಲಮಾಣಿ, ಗೋವಿಂದ ಲಮಾಣಿ, ಬೀರಪ್ಪ ಕಳ್ಳಿಮನಿ ಮತ್ತು ಜಬೀವುಲ್ಲಾ ದೊಡ್ಡಮನಿ ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್