ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ
ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ನಂತರ ಸುತ್ತಮುತ್ತಲಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.
ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.
