ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಿಡೀರ್ ದಾಳಿ
ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ.
ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ.
ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿಯ ಮಾಹಿತಿ ದೊರೆತ ಹಿನ್ನೆಲೆ ಟ್ರಾಕ್ಟರ್ ಚಾಲಕ ವೇಗವಾಗಿ ಟ್ರಾಕ್ಟರ್ ನುಗ್ಗಿಸಿ ಪರಾರಿಯಾಗಿದ್ದಾನೆ. ಇದರ ಹಿಂದೆಯೇ ಬಂದ ಜೆಸಿಬಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇನ್ನು, ಮರಳು ತುಂಬಿಕೊಂಡು ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪರಿಶೀಲಿಸಿದರು. ಮರಳು ಸಾಗಾಣೆಗೆ ಅಗತ್ಯ ದಾಖಲೆ ಇಲ್ಲದ ಹಿನ್ನೆಲೆ ಟಿಪ್ಪರ್ ಲಾರಿ ವಶಪಡಿಸಿಕೊಂಡಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…