ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ.

ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ ಅಷ್ಟಕ್ಕೆ ಸುಮ್ಮನಾಗದ ಮಹಿಳೆ ಯುವತಿಯ ಮನೆಗೆ ಆಗಾಗ ತೆರಳಿ ಕಿರುಕುಳ ನೀಡುತಿದ್ದರು.

15/02/2025 ರಂದು ಪೂಜಾಶ್ರೀ ರವರು ಮನೆಗೆ ತೆರಳುತಿದ್ದಾಗ ಅಡ್ಡಗಟ್ಟಿದ್ದ ಶ್ರುತಿ ಅವಾಚ್ಯವಾಗಿ ನಿಂದಿಸಿ ,ಹಲ್ಲೆ ಮಾಡಿ ಹಣ ನೀಡದೇ ಇದ್ದರೆ ಕೊಲೆ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕಿ ಹೋಗಿರುವ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನಲೆಯಲ್ಲಿ ಇಂದು ಬೆಳ್ಳಂಬೆಳ್ಳಗೆ ದಿಡೀರ್ ದಾಳಿ ನಡೆಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ಸಿಬ್ಬಂದಿಗಳ ತಂಡ ಬಡ್ಡಿ ಕಿರುಕುಳ ನೀಡುತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ಚೆನ್ನಪ್ಪ , ಮಹಿಳಾ ಸಿಬ್ಬಂದಿ ತ್ರಿವೇಣಿ ಮತ್ತು ಮಧುಸೂಧನ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago