ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ
ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಆಚರಣ ಸಮಿತಿಯ ಅಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಸಮಿತಿಯ ಗೌರವಾಧ್ಯಕ್ಷ ಕಲಗೋಡ್ ರತ್ನಾಕರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಜನಪ್ರಿಯ, ಜನಸ್ನೇಹಿ, ಅಭಿವೃದ್ಧಿಯ ಹರಿಕಾರರಾದಂತಹ ಶಾಸಕರ ಹುಟ್ಟುಹಬ್ಬವನ್ನು ಈ ಬಾರಿ ಹೊಸನಗರದಲ್ಲಿ ಆಚರಿಸುವ ಅವಕಾಶ ಸಿಕ್ಕಿದ್ದು ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹೊಸನಗರದ ನೆಹರು ಮೈದಾನದಲ್ಲಿ ಫೆಬ್ರವರಿ 22ರ ಶನಿವಾರ ಸಂಜೆ 6:00 ಗಂಟೆ ಯಿಂದ ಆಚರಿಸಲು ಸಮಿತಿ ತೀರ್ಮಾನಿಸಿದೆ.ಕಾರ್ಯಕ್ರಮದಲ್ಲಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಾರಥ್ಯದಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ನಟಿ-ನಿರೂಪಕಿ ಅನುಶ್ರೀ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಲ್ಲದೆ ಪ್ರಸಿದ್ಧ ಚಿತ್ರನಟರಾದ ಲೂಸ್ ಮಾದ ಖ್ಯಾತಿಯ ಯೋಗಿ, ರವಿಶಂಕರ್ ಮತ್ತು ವಿರಾಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಗೋಡು ತಿಮ್ಮಪ್ಪ , ಜಿಲ್ಲೆಯ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ, ಪ್ರಸನ್ನ ಕುಮಾರ್, ಇನ್ನು ಮುಂತಾದ ಜಿಲ್ಲೆಯ ಪ್ರಮುಖ ನಾಯಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಸೇರಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಪಂ ವ್ಯಾಪ್ತಿಯಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜೊತೆಗೆ ಶಾಲಾ-ಕಾಲೇಜುಗಳಿಗೆ ಸಿಹಿ ಹಂಚಿಕೆ :
ಶಾಸಕರ ಹುಟ್ಟು ಹಬ್ಬದ ದಿನದಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ದೇವಾಲಯಗಳಲ್ಲೂ ವಿಶೇಷ ಪೂಜೆಯ ಜೊತೆಗೆ ತಾಲೂಕಿನ ಪ್ರತಿ ಶಾಲಾ ಕಾಲೇಜುಗಳಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳಿಂದ ಸಿಹಿ ಹಂಚುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈ ಸಂಧರ್ಭದಲ್ಲಿ ತಿಳಿಸಿದರು.
ಮೂರು ಬಾರಿ ಶಾಸಕರಾಗಿ ,ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ ಬೇಳೂರು ಗೋಪಾಲಕೃಷ್ಣ ರವರ ಸೇವೆ ಮತ್ತು ನಾಯಕತ್ವವನ್ನು ಗೌರವಿಸಲು ಅವರ ಹುಟ್ಟುಹಬ್ಬದಂದು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಬೇಕು ಎಂದು ಹುಟ್ಟುಹಬ್ಬ ಆಚರಣಾ ಸಮಿತಿಯವರು ಕೋರಿದ್ದಾರೆ.
ಈ ಸಂಧರ್ಭದಲ್ಲಿ ತಾಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಶಿಮೂಲ್ ಅಧ್ಯಕ್ಷರಾದ ವಿದ್ಯಾಧರ್ , ಜಿಪಂ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ , ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಗ್ರಾಪಂ ಸದಸ್ಯರಾದ ಮಧುಸೂಧನ್ ,ಗ್ಯಾರಂಟಿ ಸಮಿತಿ ಸದಸ್ಯರಾದ ರವೀಂದ್ರ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ ಸಿಡಿಸಿ ಸಮಿತಿ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಜಿ ಆರ್ ,