ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಆಚರಣ ಸಮಿತಿಯ ಅಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಸಮಿತಿಯ ಗೌರವಾಧ್ಯಕ್ಷ ಕಲಗೋಡ್ ರತ್ನಾಕರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವೀಡಿಯೋ ಇಲ್ಲಿ ವೀಕ್ಷಿಸಿ👆

ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಜನಪ್ರಿಯ, ಜನಸ್ನೇಹಿ, ಅಭಿವೃದ್ಧಿಯ ಹರಿಕಾರರಾದಂತಹ ಶಾಸಕರ ಹುಟ್ಟುಹಬ್ಬವನ್ನು ಈ ಬಾರಿ ಹೊಸನಗರದಲ್ಲಿ ಆಚರಿಸುವ ಅವಕಾಶ ಸಿಕ್ಕಿದ್ದು ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹೊಸನಗರದ ನೆಹರು ಮೈದಾನದಲ್ಲಿ ಫೆಬ್ರವರಿ 22ರ ಶನಿವಾರ ಸಂಜೆ 6:00 ಗಂಟೆ ಯಿಂದ ಆಚರಿಸಲು ಸಮಿತಿ ತೀರ್ಮಾನಿಸಿದೆ.ಕಾರ್ಯಕ್ರಮದಲ್ಲಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಾರಥ್ಯದಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ನಟಿ-ನಿರೂಪಕಿ ಅನುಶ್ರೀ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಲ್ಲದೆ ಪ್ರಸಿದ್ಧ ಚಿತ್ರನಟರಾದ ಲೂಸ್ ಮಾದ ಖ್ಯಾತಿಯ ಯೋಗಿ, ರವಿಶಂಕರ್ ಮತ್ತು ವಿರಾಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಗೋಡು ತಿಮ್ಮಪ್ಪ , ಜಿಲ್ಲೆಯ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ, ಪ್ರಸನ್ನ ಕುಮಾರ್, ಇನ್ನು ಮುಂತಾದ ಜಿಲ್ಲೆಯ ಪ್ರಮುಖ ನಾಯಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಸೇರಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಪಂ ವ್ಯಾಪ್ತಿಯಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜೊತೆಗೆ ಶಾಲಾ-ಕಾಲೇಜುಗಳಿಗೆ ಸಿಹಿ ಹಂಚಿಕೆ :

ಶಾಸಕರ ಹುಟ್ಟು ಹಬ್ಬದ ದಿನದಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ದೇವಾಲಯಗಳಲ್ಲೂ ವಿಶೇಷ ಪೂಜೆಯ ಜೊತೆಗೆ ತಾಲೂಕಿನ ಪ್ರತಿ ಶಾಲಾ ಕಾಲೇಜುಗಳಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳಿಂದ ಸಿಹಿ ಹಂಚುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈ ಸಂಧರ್ಭದಲ್ಲಿ ತಿಳಿಸಿದರು.

ಮೂರು ಬಾರಿ ಶಾಸಕರಾಗಿ ,ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ ಬೇಳೂರು ಗೋಪಾಲಕೃಷ್ಣ ರವರ ಸೇವೆ ಮತ್ತು ನಾಯಕತ್ವವನ್ನು ಗೌರವಿಸಲು ಅವರ ಹುಟ್ಟುಹಬ್ಬದಂದು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಬೇಕು ಎಂದು ಹುಟ್ಟುಹಬ್ಬ ಆಚರಣಾ ಸಮಿತಿಯವರು ಕೋರಿದ್ದಾರೆ.

ಈ ಸಂಧರ್ಭದಲ್ಲಿ ತಾಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಶಿಮೂಲ್ ಅಧ್ಯಕ್ಷರಾದ ವಿದ್ಯಾಧರ್ , ಜಿಪಂ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ , ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಗ್ರಾಪಂ ಸದಸ್ಯರಾದ ಮಧುಸೂಧನ್ ,ಗ್ಯಾರಂಟಿ ಸಮಿತಿ ಸದಸ್ಯರಾದ ರವೀಂದ್ರ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ ಸಿಡಿಸಿ ಸಮಿತಿ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಜಿ ಆರ್ ,

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago