Headlines

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ  ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More