RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು
ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ.
ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
![](https://postmannewskannada.com/wp-content/uploads/2025/02/picsart_25-02-06_17-51-17-8117671442966297174206-1024x819.jpg)
ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ.
ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.
ಹೃದಯಾಘಾತಕ್ಕೆ ಹಲವಾರು ಕಾರಣಗಳಿವೆ. ಯುವಕರಲ್ಲಿ ಹೃದಯಾಘಾತ ಹೆಚ್ಚಾಗಲು ಮುಖ್ಯ ಕಾರಣಗಳು ಜೀವನಶೈಲಿಯ ಬದಲಾವಣೆ, ಧೂಮಪಾನ ಮತ್ತು ಮದ್ಯಪಾನ, ಅನುವಂಶೀಯತೆ, ಒತ್ತಡ, ಮತ್ತು ಇತರ ಕಾಯಿಲೆಗಳು.
ಇಂತಹ ದುರಂತಗಳನ್ನು ತಪ್ಪಿಸಲು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು, ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸುವುದು, ಒತ್ತಡವನ್ನು ನಿರ್ವಹಿಸುವುದು, ಮತ್ತು ನಿಯಮಿತವಾಗಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಹೃದಯದ ಆರೋಗ್ಯಕ್ಕೆ ಬಹಳ ಮುಖ್ಯ.
ಯುವಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಮತ್ತು ಯಾವುದೇ ರೀತಿಯ ತೊಂದರೆಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.ಇಂತಹ ದುಃಖಕರ ಘಟನೆಗಳು ನಡೆಯದಂತೆ ತಡೆಯಲು ನಮ್ಮ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ.
![](https://postmannewskannada.com/wp-content/uploads/2025/01/img-20250107-wa00188629566291902199981.jpg)
![](https://postmannewskannada.com/wp-content/uploads/2025/01/img-20250116-wa00328071370955279116311.jpg)
![](https://postmannewskannada.com/wp-content/uploads/2025/01/img-20250107-wa00196315024150579757998.jpg)