ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು
ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಮೃತ ದೇಹವನ್ನು ತೀರ್ಥಹಳ್ಳಿ ಜೇಸಿ ಆಸ್ಪತ್ರೆಯಲ್ಲಿ ಇಡಲಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.