ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ
ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ.
ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ.
2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ ಸಾಲಿನಲ್ಲಿ ಅನುಮತಿಸುತ್ತದೆ. ಈ ಸಂರಚನೆಯು ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸ್ಥಳಾವಕಾಶವನ್ನು ಮಾಡಿಕೊಡಲಿದೆ.
ಸ್ಲೀಪಿಂಗ್ ಬರ್ತ್ಗಳು ಗೌಪ್ಯತೆ ಪರದೆಗಳು, ವೈಯಕ್ತಿಕ ಓದುವ ದೀಪಗಳು ಮತ್ತು ಚಾರ್ಜಿಂಗ್ ಪಾಯಿಂಟ್ಗಳನ್ನು ಹೊಂದಿದ್ದು, ಪ್ರಯಾಣದ ಸಮಯದಲ್ಲಿ ವಿಶ್ರಾಂತಿ ಪಡೆಯಲು ಸಹಕಾರಿಯಾಗುತ್ತದೆ ಅಲ್ಲದೆ ಬಸ್ ನಲ್ಲಿ ಮನರಂಜನಾ ವ್ಯವಸ್ಥೆಗಳು ಜೊತೆ ನುರಿತ ಚಾಲಕರನ್ನ ಒಳಗೊಂಡಿರುತ್ತವೆ.
ಮುಂಗಡ ಬುಕಿಂಗ್ ಹಾಗೂ ಹೆಚ್ಚಿನ ಮಾಹಿತಿಗೆ ಕೆಳಗಿನ ನಮೂದಿಸಿದ ದೂರವಾಣಿ ಸಂಖ್ಯೆಗೆ ಕರೆಯನ್ನ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು..(8904788636)
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್