ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರೈಲಿಗೆ ಈಗಾಗಲೇ ಆನ್‌ಲೈನ್ ಟಿಕೆಟ್ ಬುಕಿಂಗ್ ಆರಂಭವಾಗಿದೆ.
ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್ ತಲುಪಲಿದೆ.
ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗರಾಜ್‍ನಿಂದ (ರೈಲು ಸಂಖ್ಯೆ 06224) ಹೊರಟು ಫೆಬ್ರವರಿ 27ರ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗ ತಲುಪಲಿದೆ ಎಂದು ತಿಳಿಸಿದ್ದಾರೆ.


