ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ.

ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ ವಾಹನವನ್ನು ನಿಧಾನ ಗೊಳಿಸುತ್ತಿದ್ದಂತೆ ಬೈಕ್ ನ ಹಿಂಬದಿಯಿಂದ ಇನ್ನೊಂದು ಬೈಕಿನಲ್ಲಿ   ಬಂದ  ಯುವಕರಿಬ್ಬರು ಗೌಡರ ಪತ್ನಿಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನಾಭರಣವನ್ನು ಎಳೆದೊಯ್ದಿದ್ದಾರೆ.

ತಾಳಿ ಸರದ ಬೆಲೆ 1.75.000/-ರೂ. ಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. 

ಈ ಬಗ್ಗೆ  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

60 minutes ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

24 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

24 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago