ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ.
ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ ಕೃಷ್ಣ ಪ್ರಗತಿ ಗ್ರಾಮೀಣ ಬ್ಯಾಂಕ್ ಹೊಸನಗರ 13 ಲಕ್ಷ , ತೋಟಗಾರ್ಸ್ ಅಡಿಕೆ ಮಂಡಳಿ ಸಾಗರ 2.5 ಲಕ್ಷ , ಪಿಎಲ್ ಡಿ ಬ್ಯಾಂಕ್ 2.5 ಲಕ್ಷ ಸಾಲವಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಮೂರು ಗಂಡು ಹಾಗೂ ಎರಡು ಹೆಣ್ಣು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…