ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ
ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 21 ಪ್ರಕರಣ ದಾಖಲಿಸಿ 3200 ರೂ. ದಂಡ ವಸೂಲಿ ಮಾಡಲಾಗಿದೆ.
ಈ ದಾಳಿಯಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕುನಿಯಂತ್ರಣ ಕೋಶದ ರವಿರಾಜ್ ಜಿ ಕೆ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕರಿಬಸಮ್ಮ,ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ , ಆರೋಗ್ಯ ಇಲಾಖೆಯ ಅಮೃತೇಶ್, ಗಾಯತ್ರಿ, ರಾಘವೇಂದ್ರ, ಪ್ರವೀಣ್ ಭಾಗಿಯಾಗಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…