ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್, (26)  ಎನ್ನುವವನನ್ನು ಬಂಧಿಸಲಾಗಿದೆ. ಆರೋಪಿತನಿಂದ ಅಂದಾಜು ಮೌಲ್ಯ 6,000  ರೂಗಳ 349  ಗ್ರಾಂ ತೂಕದ ಒಣ ಗಾಂಜಾ,  ರೂ 600/ ನಗದು ಹಣ, ಮತ್ತು ಕೃತ್ಯ ಕ್ಕೆ ಉಪಯೋಗಿಸಿದ ಅಂದಾಜು ಮೌಲ್ಯ 8,000/-  ರೂಗಳ ಮೊಬೈಲ್ ಪೋನ್ ಹಾಗೂ ಅಂದಾಜು ಮೌಲ್ಯ 20,000ರೂಗಳ ದ್ವಿ ಚಕ್ರ ವಾಹನ ಸೇರಿದಂತೆ ಒಟ್ಟು 34,600 ರೂಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ಮತ್ತೊಂದು ಪ್ರಕರಣ  ಕೀರ್ತಿ ನಗರದ ದೇವಂಗಿ ಪಾರ್ಕಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸುರೇಂದ್ರ ಬಬ್ಲು ಎಂಬಾತನನ್ನು ಬಂಧಿಸಲಾಗಿದೆ.‌ 15000 ರೂ ಮೊಬೈಲ್ 363 ಗ್ರಾಂ ಮೌಲ್ಯದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

24 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago