ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ ಯ 50 ವಿದ್ಯಾರ್ಥಿಗಳ ಹೆಸರನ್ನು ಧ್ವನಿಯ ಮೂಲಕ ಹೇಳಿ ಗಮನ ಸೆಳೆದಿದ್ದಾರೆ.

ವಸತಿ ಶಾಲೆಯಲ್ಲಿರುವ 250 ವಿದ್ಯಾರ್ಥಿಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹೆಸರನ್ನು ಹೇಳುವ ಸಾಮರ್ಥ್ಯ ಹೊಂದಿರುವ ಯೋಗೇಶ್ ಮಾದರಿ ಎನಿಸಿದ್ದಾರೆ.

ಮಣಿವಣ್ಣನ್ ಟಾಸ್ಕ್!

ಕೇರಳ ರಾಜ್ಯದಲ್ಲಿ ಇಂತಹ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್ ತಮ್ಮ ಇಲಾಖೆಯ ಅಧೀನದಲ್ಲಿ ಬರುವ ಶಾಲೆಗಳಿಗೆ ವಿದ್ಯಾರ್ಥಿಗಳ ಧ್ವನಿ ಆಧಾರದ ಮೇಲೆ ಹೆಸರು ಹೇಳುವ ಟಾಸ್ಕ್ ನೀಡಿದ್ದರು. ಅಲ್ಲದೆ ಇದರಲ್ಲಿ ಉತ್ತಮ ಸಾಧನೆ ತೋರುವ ಟಾಪ್ 10 ಶಿಕ್ಷಕರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಜೊತೆ ಲಂಚ್ ಮಾಡುವ ಅವಕಾಶ ಕೂಡ ನೀಡಿದ್ದರು.

ರಾಜ್ಯದಲ್ಲಿ ಇಲಾಖೆಯಡಿ 721 ವಸತಿ ಶಾಲೆಗಳಿದ್ದು ಸುಮಾರು 6000 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಸಂಬಂಧ, ಅರ್ಪಣಾ ಮನೋಭಾವ ಇದ್ದಲ್ಲಿ ಮಾತ್ರ ಒಳ್ಳೆ ಶಿಕ್ಷಣ ಸಿಗುತ್ತದೆ ಎಂಬ ಕಲ್ಪನೆಗೆ.. ಕೇರಳದ ಶಿಕ್ಷಕನ ವಿಡಿಯೋ ಮೂಲಕ ರಾಜ್ಯದ ಶಿಕ್ಷಕರಿಗೆ ಟಾಸ್ಕ್ ನೀಡಿದ್ದು ಇಡೀ ರಾಜ್ಯದ ಶಿಕ್ಷಕರಲ್ಲಿ ಸಂಚಲನ ಮೂಡಿಸಿದೆ.

ಯೋಗೇಶ್ ಹೆಬ್ಬಾಳಗೆರೆ ಮಾದರಿಯಲ್ಲಿ ರಾಜ್ಯದಲ್ಲಿ ಬಹಳಷ್ಟು ಶಿಕ್ಷಕರು ಪ್ರಯತ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಉತ್ತಮ ಟಾಸ್ಕ್:

ನಮ್ಮ ಇಲಾಖೆ ನೀಡಿದ ನಿರ್ದೇಶನದ ಮೇಲೆ ಈ ಪ್ರಯತ್ನ ಮಾಡಲಾಗಿದೆ. 10 ನೇ ತರಗತಿಯಲ್ಲಿರುವ 50 ಹೆಸರುಗಳನ್ನು ಧ್ವನಿಯ ಮೂಲಕ ಗುರುತಿಸಿದ್ದೇನೆ. ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು ಶೇ 90 ರಷ್ಟು ಹೇಳುತ್ತೇನೆ ಎಂಬ ವಿಶ್ವಾಸವಿದೆ.

-ಯೋಗೇಶ್ ಹೆಬ್ಬಳಗೆರೆ,ಪ್ರಾಂಶುಪಾಲರು
ಇಂದಿರಾ ಗಾಂಧಿ ವಸತಿ ಶಾಲೆ ಗೇರುಪೂರ

ಮಣಿವಣ್ಣನ್ ಮೆಚ್ಚುಗೆ:

ಕೇರಳದ ವಿಡಿಯೋ ಟ್ವಿಟ್ಟರ್ ನಲ್ಲಿ ನೋಡಿದಾಗ ನಮ್ಮ ಶಿಕ್ಷಕರು ಹೇಗಿದ್ದಾರೆ ಒಂದು ಸಣ್ಣ ಪ್ರಯತ್ನವಾಗಿ ಟಾಸ್ಕ್ ನೀಡಬೇಕೆನಿಸಿತು. ರಾಜ್ಯದಲ್ಲಿ ಐದಾರು ಶಿಕ್ಷಕರು ವಿಡಿಯೋ ಶೇರ್ ಮಾಡಿದ್ದಾರೆ. ಪ್ರಾಂಶುಪಾಲ ಯೋಗೇಶ್ ಧ್ವನಿಯ ಮೇಲೆ ವಿದ್ಯಾರ್ಥಿಗಳನ್ನು ಗುರುತಿಸಿ ಗಮನ ಸೆಳೆದಿದ್ದಾರೆ.. ಶಿಕ್ಷಕರಿಗೆ ಅರ್ಪಣಾ ಮನೋಭಾವ ಇದ್ದಲ್ಲಿ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲು ಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಚಲನವಲನ, ಪರಿಚಯ ಮುಖ್ಯ.
-ಮಣಿವಣ್ಣನ್, ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

18 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

18 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

18 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

23 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago