ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು!
ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ.
ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್ ಚಾಲಕ ಸಾವನ್ನಪ್ಪಿದ್ದಾನೆ.ಬೈಕ್ ಚಾಲಕ ಯಾರು ಎಂಬುದರ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಸ್ಥಳಕ್ಕೆ ಪೊಲೀಸರು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.