w
Headlines
Home » ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

N6558148671741877968203d24748f0e73eef97a0ed75b8e88e91425fdf8d7a912f0142fc7b31ad60e0c838.jpg

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ.

ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ. ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ ಮಾಡಿದ್ದಾಳೆ. ಆಗ ನೀಲಕಂಠ, ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ದುಡ್ಡಿಗೆ ಬೇಡಿಕೆ ಇಟ್ಟಿದ್ದಾನೆ. ದುಡ್ಡು ಕೊಡಲು ಆಗದಿದ್ದರೆ ನನ್ನ ಜೊತೆ ಮಲಕೋ ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನ ಕಳುಹಿಸು ಎಂದಿದ್ದಾನೆ. ಹೀಗಂತ ಮಹಿಳೆ ಆರೋಪಿಸಿದ್ದಾಳೆ.

ಇದರಿಂದ ಆಕ್ರೋಶಗೊಂಡ ಮಹಿಳೆ, ಮಳಸಾಪುರ ಗ್ರಾಮದಿಂದ ಮರಗುತ್ತಿ ಪಂಚಾಯತಿಗೆ ಆಯ್ಕೆಯಾಗಿರುವ ನೀಲಕಂಠನ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗ ಪೊಲೀಸರು ಬಿಎನ್​ಎಸ್ ಕಾಯ್ದೆ 75, 78,79 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.