w
Headlines
Home » ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

IMG 20250315 WA0005.jpg

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ.

ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.

ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.