ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು
ಶಿವಮೊಗ್ಗ : ಆನಂದಪುರದ ಸಮೀಪದ ಹೊಸಗುಂದ ಬಳಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ಭೀಕರತೆಗೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ.
ಕಾರಿನಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಸಾಗರ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.