HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ
ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ.
ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ.
ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ ಮರಳಿ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳ ಕಳೇಬರಗಳು ಪತ್ತೆಯಾಗಿವೆ.
ಚಿರತೆಯ ಇರುವಿಕೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಜನನಿಬಿಡ ಪ್ರದೇಶವಾಗಿದ್ದು ಈ ಭಾಗದಲ್ಲಿ ದಟ್ಟ ಕಾಡಿಲ್ಲ.
ನಾಗರಿಕ ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿದ ಹಲವು ಘಟನೆಗಳು ರಾಜ್ಯದಲ್ಲಿ ಆಗಾಗ್ಗೆ ಕೇಳಿ ಬರುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಪತ್ತೆ ಮಾಡಿ ಅಭಯಾರಣ್ಯಕ್ಕೆ ಸಾಗಿಸಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…