ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ ಮಹತ್ವದ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಯುಗಾದಿ ನಂತರ ದೇಶ-ವಿದೇಶಗಳಲ್ಲಿ ಏನೇನಾಗಲಿದೆ ಎನ್ನುವ ಆಘಾತಕಾರಿ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಯಾದಗಿರಿಯಲ್ಲಿಂದು ಮಾತನಾಡಿರುವ ಕೋಡಿಹಳ್ಳಿ ಶ್ರೀಗಳು, ಎಲ್ಲಾ ಸಮುದಾಯದ ಎಲ್ಲಾ ಜಾತಿ ಎಲ್ಲಾ ವರ್ಗದವರು ಈ ಭೂಮಿ ಮೇಲೆ ವಾಸವಿದ್ದಾರೆ. ಪ್ರಾಚೀನ ಕಾಲದಿಂದಲೂ ಹಾಲಮತ ಸಮಾಜ ಅಂತ ಆಂದ್ರೆ ಅಡವಿಯಲ್ಲಿದ್ದು ಕುರಿಗಳನ್ನ ಸಾಕೋದು ಮಾಡ್ತಾರೆ. ಕುರಿಯ ಇಕ್ಕಿಯಲ್ಲಿ ಲಿಂಗವನ್ನ ಕಂಡವರು. ಪ್ರಕೃತಿ ಮೇಲೆ ಗಾಳಿಯ ಮೇಲೆ ಭೂಮಿಯ ಮೇಲೆ ಅವರು ಅಡವಿಯಲ್ಲಿ ಇದ್ದು ಕಂಡದ್ದು ನೋಡಿದ್ದ ಅನುಭವಸಿದ್ದನ್ನ ಹೇಳುತ್ತಾ ಬಂದಿದ್ದಾರೆ ಅದು ಕುರುವಿನ ರಟ್ಟು. ಹಾಲು ಕೆಟ್ಟರು ಹಾಲಮತ ಸಮಾಜ ಕೆಡುವುದಿಲ್ಲ ಅಂತ ಹೇಳುತ್ತಾರೆ. ಇವತ್ತು ಹಾಲಮತ ಸಮಾಜದವರ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಅವರಾಗೇ ಬಿಡಬೇಕು. ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಎಂದು ಯುಗಾದಿ ಮೇಲೆ ಹೇಳುತ್ತೇನೆ ಎಂದಿದ್ದಾರೆ.

ಈ ಮೂಲಕ ಕೋಡಿಹಳ್ಳಿ ಶ್ರೀ ಪರೋಕ್ಷವಾಗಿ ಸದ್ಯ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.

ನಮ್ಮಲ್ಲಿ ಎರಡು ಭಾಗ ಮಾಡುತ್ತಾರೆ. ಒಂದು ಸಂಕ್ರಾಂತಿ ಭವಿಷ್ಯ ಇನ್ನೊಂದು ಯುಗಾದಿ ಭವಿಷ್ಯ ಅಂತ. ಸಂಕ್ರಾಂತಿ ಭವಿಷ್ಯ ರಾಜರುಗಳಿಗೆ ಮಹಾರಾಜರುಗಳಿಗೆ ದೊಡ್ಡ ವ್ಯಾಪಾರಸ್ಥರಿಗೆ ಸಂಕ್ರಾಂತಿ ಭವಿಷ್ಯ ಇರುತ್ತೆ. ಯುಗಾದಿ ಮೇಲೆ ಬರೋದು ಚಂದ್ರಮಾನ ಯುಗಾದಿ. ಚಂದ್ರನನ್ನ ಆಧಾರವಾಗಿಟ್ಟುಕೊಂಡು ಮಳೆ,ಬೆಳೆ ,ಆಳ್ವಿಕೆಗಳು,ರಾಜರುಗಳು,ಅವಘಡಗಳು,ದುಖ ದುಮ್ಮಾನಗಳು,ಸಂತೋಷಗಳು ಇದರ ಮೇಲೆ ಹೇಳೆದೋ ಯುಗಾದಿ ಸಮಸ್ರಫಲ. ಯುಗಾದಿ ಇನ್ನೊಂದು ತಿಂಗಳು ದೂರವಿದೆ. ಅದರ ಮೇಲೆ ಹೇಳೋದು ಸ್ವಲ್ಪ ಕಷ್ಟ. ನಮ್ಮ ಪ್ರಕಾರ ಬರುವಂತ ದಿನಗಳಲ್ಲಿ ಕರ್ನಾಟಕಕ್ಕೆ ತೊಂದರೆ ತಾಪತ್ರೆಗಳಿಲ್ಲ. ಮಳೆ ಬೆಳೆ ಚೆನ್ನಾಗಿಯಿದೆ ಸುಭಿಕ್ಷಿತೆ ಇರುತ್ತೆ ಯಾವುದೇ ತೊಂದರೆಗಳು ಕಾಣುತ್ತಿಲ್ಲ.

ಯುಗಾದಿಯ ಬಳಿಕ ಮತ್ತೆ ಜಾಗತಿಕ ಬಗ್ಗೆ ಬಹಳ ಅಜಾಗುರಕತೆಯಿದೆ. ಹೋದ ವರ್ಷಕ್ಕಿಂತ ಈ ವರ್ಷ ಇನ್ನು ಭೀಕರಕತೆ ಕಾಡುವ ಲಕ್ಷಣಗಳಿವೆ. ಭೂಮಿ ಅಗಲಾಗೊಂದು(ಭೂಕಂಪ) ಸಾವು ನೋವು ಸಂಭವಿಸೋದು, ಕಟ್ಟಡಗಳು ನೆಲಕುರುಳೋದು ಮುಂದುವರೆಯುತ್ತೆ. ಭೂ ಸುನಾಮಿ,ಜಲ ಸುನಾಮಿ,ಭಾಹ್ಯ ಸುನಾಮಿ ಅಂತ ಹೇಳುತ್ತಿವೆ. ಇಲ್ಲಿವರೆಗೆ ಬರಿ ಜಲ ಸುನಾಮಿ ಆಗುತ್ತಿತ್ತು. ಈ ಬಾರಿ ಭುಸುನಾಮಿ ಕೂಡ ಆಗುತ್ತೆ ಎಂದು ಕೋಡಿಹಳ್ಳಿ ಶ್ರೀ ಸ್ಫೋಟಕ ಭವಿಷ್ಯ ನುಡಿದಿದ್ದು, ಜೊತೆಗೆ ಭಾಹ್ಯಕಾಶದಲ್ಲೂ ಸುನಾಮಿ ಆಗುತ್ತೆ. ಅದನ್ನ ಯುಗಾದಿ ನಂತರ ಹೇಳುತ್ತೇನೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

21 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

21 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago