ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ
ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಅದರಂತೆ ಇಂದು ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ತಮ್ಮ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಡಿವೈಎಸ್ಪಿ ಕೃಷ್ಣಮೂರ್ತಿ ಅವರ ವಿಚಾರಣೆ ನಡೆಸಲಾಗುತ್ತಿದೆ.