ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ
ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ.
ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ.
ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಕ್ಷಣ ಸ್ಪಂದಿಸಿ ಅಗ್ನಿಶಾಮಕ ದಳಕ್ಕೆ ಹಾಗೂ ಕೆಇಬಿ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ರವರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.