Breaking
12 Jan 2026, Mon

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್  ಕೈಗೆತ್ತಿಕೊಳ್ಳಲಿದೆ. ನಗರದ ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ  ಭವನ ಬಳಕೆಯಾಗುತ್ತಿದೆ. ಯಾವುದೇ ಭ್ರಷ್ಟಾಚಾರ ಅಥವಾ ಹಣದ ಅಪವ್ಯಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು .
ಕೆಲವರು ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ಆರೋಪಗಳನ್ನು ಟ್ರಸ್ಟ್  ತಿರಸ್ಕರಿಸುತ್ತದೆ.

ಜಿಲ್ಲಾಧಿಕಾರಿಗಳಿಗೆ ಈ ಸುಳ್ಳು ಆರೋಪಗಳ ಮನವಿ ಪತ್ರವನ್ನು ಸಹ ಮೇಲಿನ ಸಂಘಟನೆಯವರು  ನೀಡಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ನಿರ್ಮಾಣವಾಗಬಾರದು ಎಂಬ ಉದ್ದೇಶದಿಂದ ಈ ಮಾಹಿತಿ ನೀಡುತ್ತಿರುವುದಾಗಿ ಅವರು ವಿವರಿಸಿದರು.
ಟ್ರಸ್ಟ್ ಬೈಲಾಪ್ರಕಾರ ಕೆಲಸ ನಿರ್ವಹಿಸುತ್ತಿದೆ ಪತ್ರಿಕಾಗೋಷ್ಠಿಯಿಂದ ಬಂದ ಹಣವನ್ನು ಪತ್ರಕರ್ತರಿಗೆ ಊಟ , ತಿಂಡಿ , ಕಾಫಿ , ವಿದ್ಯುತ್ ಬಿಲ್ , ಇಂಟರ್ನೆಟ್,  ಸಿಬ್ಬಂದಿ ವೇತನ,  ಪತ್ರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮ,  ಪ್ರತಿಭಾ ಪುರಸ್ಕಾರ , ಉಪನ್ಯಾಸ , ಕ್ರೀಡೆ ಇತ್ಯಾದಿಗಳಿಗೆ ಬಳಸಲಾಗುತ್ತಿದೆ . ಬ್ಯಾಂಕ್ ಖಾತೆಯ ಮೂಲಕವೇ ನಿರ್ವಹಿಸಲಾಗುತ್ತಿದೆ. ಯಾವುದೇ ವ್ಯಕ್ತಿ ಅಥವಾ ಅನ್ಯ ಸಂಸ್ಥೆ ಹೆಸರಲ್ಲಿ ಪತ್ರಿಕಾ ಭವನದ ಹಣ ಅಪವ್ಯಯವಾಗುತ್ತಿಲ್ಲ . ಎಲ್ಲಾ ವ್ಯವಹಾರಗಳು ಪಾರದರ್ಶಕವಾಗಿದ್ದು ಅನುಮಾನಕ್ಕೆ ಆಸ್ಪದವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆದರೂ  ಕೆಲವರು ಅಪಪ್ರಚಾರ ಮಾಡುತ್ತಿದ್ದು ಈ ಬಗ್ಗೆ ಟ್ರಸ್ಟ್ ವತಿಯಿಂದ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version