ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ.
ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್ ನಗರದ ಮೊಹಮ್ಮದ್ ಕೈಫ್ (21) ಬಂಧಿತರು.
ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಆರೋಪಿಗಳಿಂದ ಅಂದಾಜು ₹ 70,000 ಮೌಲ್ಯದ 2 ಕೆ.ಜಿ, 52 ಗ್ರಾಂ ಒಣ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಸಿಬ್ಬಂದಿ ಬಿ.ಧರ್ಮನಾಯ್ಕ, ಬಿ.ರವಿ, ಆಂಡ್ರೋಸ್ ಜೋನ್ಸ್, ಸಂಗಮೇಶ್ ಮತ್ತು ಫಿರ್ದೋಸ್ ಅಹಮ್ಮದ್ ಇದ್ದರು. ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…