ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ
ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್ ಮೇಲೆ ಜಿಎಸ್ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್ ನೀಡಿದ್ದಾರೆ.
ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಸುಮಾರು 65 ಕ್ವಿಂಟಾಲ್ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್ ಎಂಬುವರಿಗೆ ಸೇರಿದ 23 ಕ್ವಿಂಟಾಲ್ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್ನಲ್ಲಿ ತುಂಬಿಸಲಾಗಿತ್ತು.
ಆ ಸಮಯಕ್ಕೆ ಖಚಿತ ಮಾಹಿತಿ ಮೇರೆಗೆ ಬಂದ ಅಧಿಕಾರಿಗಳು ರೈತರ ಗೋಡೌನ್ ಹಾಗೂ ಕ್ಯಾಂಟರ್ ಅನ್ನು ತಡೆಹಿಡಿದು ಮುಟ್ಟುಗೋಲು ಹಾಕಿಕೊಂಡು ಹೋಗಿದ್ದಾರೆ.
ಇದರಿಂದ ರೊಚ್ಚಿಗೆದ್ದ ಕೆಲವು ರೈತರು, ರೈತರು ಬೆಳೆದ ಬೆಳೆಗೆ ಇದುವರೆಗೂ ಯಾವುದೇ ಸರ್ಕಾರ ತೆರಿಗೆ ಹಾಕಿಲ್ಲ. ರೈತರು ಸಾಲಸೋಲ ಮಾಡಿ ಬೆಳೆದ ಬೆಳೆಗಳಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ. ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ರೀತಿ ರೈತರು ಬೆಳೆದ ಬೆಳೆಗೆ ಅಧಿ ಕಾರಿಗಳು ಏಕಾಏಕಿ ಬಂದು ತೆರಿಗೆ ವಿಧಿಸುತ್ತಿದ್ದಾರೆ. ಇಲ್ಲಿ ಯಾರು ಕೂಡ ವ್ಯಾಪಾರದಾರರಲ್ಲ. ರೈತರು ಬೆಳೆದ ಬೆಳೆಗೆ ಮನೆಯಲ್ಲಿ ಸ್ಥಳಾವಕಾಶವಿಲ್ಲದೆ ಇರುವುದರಿಂದ ಬಾಡಿಗೆ ಗೋಡೌನ್ನಲ್ಲಿ ಅಡಿಕೆ ದಾಸ್ತಾನು ಇಡಲಾಗಿದೆಯೇ ಹೊರತು ಸರ್ಕಾರದ ಕಣ್ಣುತಪ್ಪಿಸಿ ವ್ಯಾಪಾರ ಮಾಡುವ ಯಾವುದೇ ಉದ್ದೇಶವಿಲ್ಲ. ಇದೇ ರೀತಿ ದಾಳಿ ಮುಂದುವರಿದರೆ ರೈತರು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply