Headlines

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ ನೇರವಾಗಿ ಹೊಸನಗರ ತಾಲೂಕಿನ ವಿವಿಧೆಡೆ ಮಳೆಹಾನಿಯಾಗಿರುವ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ , ಒಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿತ್ತು ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳ ಪರಿಶೀಲನೆ ನಡೆಸಿದ್ದರು.

ಮಳೆಯಿಂದ ನೆಲಕ್ಕುರುಳಿರು ವಿದ್ಯುತ್ ಕಂಬ ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದೂರವಾಣಿ ಮೂಲಕ ಸೂಚಿಸಿದ್ದರು.

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಭೇಟಿ , ಪರಿಶೀಲನೆ

ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಮಾವಿನಕಟ್ಟೆ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಸಿಡಿಲಿಗೆ ಮನೆಹಾನಿಯಾಗಿದ್ದು ಸದರಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹೆಚ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾವಿನಕಟ್ಟೆ ನಿವಾಸಿ ರಾಘವೇಂದ್ರ ಬಿನ್ ಕೃಷ್ಣಮೂರ್ತಿ ಎಂಬುವವರ ಮನೆ ಭಾರಿ ಮಳೆಗೆ ತೀವ್ರ ಹಾನಿಯಾಗಿದ್ದು ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹೆಚ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *