ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು
ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು.
ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ
ಇಳಿದಿದ್ದಾಗ ಈ ದುರ್ಘಟನೆ ನಡೆದಿದೆ.
ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ ಸಿಬ್ಬಂದಿ ಮೇಲಕ್ಕೆ ತೆಗೆದರು.
ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ – ಮರಣೋತ್ತರ ಪರೀಕ್ಷೆ ನಡೆಸಿ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…