Headlines

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More