HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು.

ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್ ಜಾಗೃತಿ ಕಾರ್ಯಕ್ರಮವಾಗಿತ್ತು ಆದರೂ ಕಳ್ಳತನದ ಬಗ್ಗೆ ಕ್ಷಣಮಾತ್ರದಲ್ಲಿ ಸುದ್ದಿಯಾಗಿ ಜನರು ಅಲರ್ಟ್ ಆಗಿದ್ದರು..

ನಡೆದಿದ್ದೇನು..!!??

ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹಾಗೂ ಪಿಎಸ್ಐ ಶಂಕರಗೌಡ ಪಾಟೀಲ್‌ರವರ ನೇತೃತ್ವದಲ್ಲಿ ಜನ ಜಾಗೃತಿಗಾಗಿ ಅಣಕು ಪ್ರದರ್ಶನವನ್ನು ಹೊಸನಗರದ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಾತ್ರಧಾರಿಗಳಾಗಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದು ನಿಜವಾಗಿಯೂ ಬಸ್‌ ನಿಲ್ದಾಣದ ಆವರಣದಲ್ಲಿ 50 ಸಾವಿರ ಹಣ ಇರುವ ಬ್ಯಾಗ್ ಕಳ್ಳತನವಾಗಿದೆ ಎಂಬ ರೀತಿಯಲ್ಲಿ ಹೊಸನಗರದಲ್ಲೆಲ್ಲಾ ಸುದ್ದಿ ಹಬ್ಬಿದೆ.

ರಾಜ್ಯಾದ್ಯಂತ ಬೈಕ್‌ನಲ್ಲಿ ಬಂದು ಸರ ಕಳ್ಳತನ, ಬ್ಯಾಗ್ ಕಳ್ಳತನ ಈ ರೀತಿ ಕಳ್ಳತನವಾಗುತ್ತಿದ್ದು ಹೊಸನಗರದಲ್ಲಿಯೂ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಸಿಬ್ಬಂದಿಯಾದ ಕೌಸಲ್ಯರವರು ಬ್ಯಾಗ್ ಹಿಡಿದುಕೊಂಡು ಬಸ್‌ ನಿಲ್ದಾಣದ ಮುಂಭಾಗ ನಿಂತಿರುವ ಹಾಗೇ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಗೋಪಾಲಕೃಷ್ಣ ಹಾಗೂ ಶಿವರಾಜ್‌ರವರು ಬೈಕ್‌ನಿಂದ ಬಂದು ಮುಂಭಾಗದಲ್ಲಿ ನಿಲ್ಲಿಸಿ ಒಬ್ಬರು ಬೈಕ್‌ನಿಂದ ಇಳಿದು ಬ್ಯಾಗ್ ಕಸಿದುಕೊಂಡು ಹೋಗುತ್ತಾರೆ ಅಷ್ಟು ಹೊತ್ತಿಗೆ ಹೊಸನಗರದ ಜನರು ಒಟ್ಟಾಗಿ ಸೇರಿ ಕಳ್ಳರನ್ನು ಹುಡುಕುತ್ತಾರೆ. ಅಷ್ಟು ಹೊತ್ತಿಗೆ ಕಳ್ಳರ ವೇಷದಾರಿಗಳು ಮಾವಿನಕೊಪ್ಪ ಸರ್ಕಲ್‌ಗೆ ಹೋಗಿರುತ್ತಾರೆ ಅಲ್ಲಿನ ಜನರು ಅಡ್ಡ ಹಾಕಿ ಕಳ್ಳರನ್ನು ಹಿಡಿಯುತ್ತಾರೆ.

ಬ್ಯಾಗ್ ಕಳ್ಳತನವಾದ ತಕ್ಷಣ 112ಗೆ ಫೋನ್ ಮಾಡುತ್ತಾರೆ. ತಕ್ಷಣ 112 ಸಿಬ್ಬಂದಿಗಳು ಬಂದು ಕಳ್ಳತನದ ಬಗ್ಗೆ ವಿಚಾರಿಸಲಾಗಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್‌ರವರಿಗೆ ಕಳ್ಳತನವಾದ ಬಗ್ಗೆ ಮಾಹಿತಿ ನೀಡುತ್ತಾರೆ. ಶಂಕರಗೌಡ ಪಾಟೀಲ್ ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ತನಿಖೆ ಕಾರ್ಯ ನಡೆಸುತ್ತಾರೆ ತಕ್ಷಣ ಸಿಪಿಐಗೆ ಮಾಹಿತಿ ನೀಡುತ್ತಾರೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ನೇತೃತ್ವ ತಂಡ ಸ್ಥಳಕ್ಕೆ ಆಗಮಿಸಿ ಕಳ್ಳತನವಾದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆಯುತ್ತಾರೆ. ತಕ್ಷಣ ತಾಲ್ಲೂಕಿನ ಎಲ್ಲ ಚೆಕ್ ಪೊಸ್ಟ್ಗಳಿಗೆ ಮಾಹಿತಿ ನೀಡುತ್ತಾರೆ. ಮಾಹಿತಿಯ ಬಗ್ಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕಳ್ಳರ ವೇಶದಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತನಿಖೆ ನಡೆಸುತ್ತಿರುತ್ತಾರೆ.

ಒಟ್ಟಾರೆ ಒಂದು ಸಿನಿಮಾ ಕಥೆಯಂತೆ ಮೂಡಿಬಂದ ಪೊಲೀಸ್ ಇಲಾಖೆಯ ಕಾರ್ಯ ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯಾಗಿ ಜನರಿಗೆ ಜಾಗೃತಿ ಮೂಡಿಸಿದ್ದು ಹೊಸನಗರ ಪೊಲೀಸ್ ಇಲಾಖೆಯ ಎಲ್ಲ ಸಿಬ್ಬಂದಿಗಳು ಅಚ್ಚುಕಟ್ಟಾಗಿ ತಮಗೆ ನೀಡಿರುವ ಪಾತ್ರವನ್ನು ನಿರ್ವಹಿಸಿದ್ದರು.

ಈ ಜಾಗೃತಿ ಕಾರ್ಯಕ್ರಮ ಒಂದು ಕ್ಷಣ ನಿಜವಾಗಿಯೂ ಕಳ್ಳತನ ನಡೆದೇಬಿಟ್ಟಿತು ಎನ್ನುವಂತೆ ಸಾರ್ವಜನಿಗೆ ಅನ್ನಿಸಿದಂತೂ ಸತ್ಯ….

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

24 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago