ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪ್ರಶಾಂತ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.